More

    ಯುವನಿಧಿ ಯೋಜನೆಗೆ ಡಿ.26ಕ್ಕೆ ಸಿಎಂ ಚಾಲನೆ

    ಬೆಂಗಳೂರು:
    ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಯುವನಿಧಿ ಯೋಜನೆ ನೋಂದಣಿಗೆ ಡಿ.26ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
    ವಿಧಾನಸೌಧದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಅಂದು ಯುವನಿಧಿ ಗ್ಯಾರಂಟಿ ಕಾರ್ಯಕ್ರಮದ ಲೋಗೋ ಅನಾವರಣವನ್ನು ಮಾಡಲಾಗುವುದು ಎಂದರು.
    ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ ಯೋಜನೆಯಾಗಿ ಯುವನಿಧಿ ಜಾರಿಗೆ ತರಲು ಎಲ್ಲಾ ಹಂತದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪದವಿ ಮುಗಿಸಿದವರಿಗೆ ಮೂರು ಸಾವಿರ, ಡಿಪ್ಲೊಮಾ ಮಾಡಿದವರಿಗೆ 1500 ಸಾವಿರ ರೂ ನೀಡಲಾಗುವುದು ಎಂದರು.
    ಈ ಕಾರ್ಯಕ್ರಮ ವಿಳಂಬ ಮಾಡಲಾಗಿದೆ ಎನ್ನುವುದು ಸರಿಯಲ್ಲ. ಪದವಿ ಮುಗಿಸಿ ಆರು ತಿಂಗಳ ನಂತರ ಈ ಯೋಜನೆಯನ್ನು ಪಲಾನುಭವಿಗಳಿಗೆ ತಲುಪಿಸುವುದು ನಮ್ಮ ಉದ್ದೇಶವಾಗಿದೆ. ಜ.12ರಂದು ವಿವೇಕಾನಂದ ಜಯಂತಿ ದಿನ ಶಿವಮೊಗ್ಗದಲ್ಲಿ ಯುವನಿಧಿ ಗ್ಯಾರಂಟಿ ಹಣ ವರ್ಗಾವಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದೇವೆ ಎಂದರು.
    ರಾಜ್ಯದಲ್ಲಿ ಯುವನಿಧಿ ಯೋಜನೆಗೆ 5,29,153 ಫಲಾನುಭವಿಗಳಿದ್ದಾರೆ ಎಂದು ಅಂದಾಜಿಸಲಾಗಿದೆ. ಅದರಲ್ಲಿ 4,81,000 ಪದವೀಧರರು, 48,153 ಡಿಪ್ಲೊಮೊ ತೇರ್ಗಡೆಯಾದವರು ಸೇರಿದ್ದಾರೆ ಎಂದರು.
    2023-24 ರಲ್ಲಿ ನಿರುದ್ಯೋಗ ಭತ್ಯೆ ನೀಡಲು 250 ಕೋಟಿ ಅನುದಾನ ಮೀಸಲಿಡಲಾಗಿದೆ. ಮುಂದಿನ ವರ್ಷ ಈ ಮೊತ್ತ ಇನ್ನೂ ಹೆಚ್ಚಳವಾಗಲಿದೆ ಎಂದು ಶರಣಪ್ರಕಾಶ್ ಪಾಟೀಲ್ ಹೇಳಿದರು. ಈ ಯೋಜನೆಯ ಫಲಾನುಭವಿಗಳಾಗಲು ಕನ್ನಡಿಗರಾಗಿರಬೇಕು. ಕನಿಷ್ಠ ಆರು ವರ್ಷಗಳ ಕಾಲ ಕರ್ನಾಟಕದಲ್ಲಿ ವ್ಯಾಸಂಗ ಮಾಡಿರಬೇಕು. ಸೇವಾಸಿಂಧು ಮೂಲಕ ಇದಕ್ಕೆ ಅರ್ಜಿ ಸಲ್ಲಿಸಬಹುದು ಎಂದರು.
    ಆಧಾರ್ ಸಂಖ್ಯೆಯನ್ನು ನಮೂದಿಸಿ ಒಟಿಪಿ ಪಡೆದು ಹಾಗೆ ಕೆವೈಸಿ ಮಾಹಿತಿಯನ್ನು ಪಡೆದುಕೊಳ್ಳಬೇಕು. ಅರ್ಹ ಅಭ್ಯರ್ಥಿಗಳ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಲಿದೆ ಎಂದರು.
    ಸರ್ಕಾರಿ, ಅನುದಾನಿತ ಸಂಸ್ಥೆ, ಖಾಸಗಿ ವಲಯದಲ್ಲಿ ಉದ್ಯೋಗದಲ್ಲಿರುವ ಅಭ್ಯರ್ಥಿಗಳು ಮತ್ತು ಸ್ವಯಂ ಉದ್ಯೋಗ ಮಾಡುವ ಹಾಗೂ ವಿದ್ಯಾಭ್ಯಾಸ ಮುಂದುವರಿಸುವ ಅಭ್ಯರ್ಥಿಗಳು ಈ ಯೋಜನೆಗೆ ಅರ್ಹರಾಗುವುದಿಲ್ಲ ಎಂದರು.
    ಅಭ್ಯರ್ಥಿಗಳು ಯುವನಿಧಿಗೆ ಅರ್ಜಿ ಸಲ್ಲಿಸಲು ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರಗಳು,
    ಗ್ರಾಮ ಒನ್ ಕೇಂದ್ರಗಳನ್ನು ಬಳಸಿ ಅರ್ಜಿ ಸಲ್ಲಿಸಬಹುದು. ಠಿಠಿ://ಛಿಜ್ಞಿಜ್ಠಜ.ಚ್ಟ್ಞಠಿ.ಜಟ.ಜ್ಞಿ/ ಲಾಗಿನ್ ಆಗಿ ಪೋರ್ಟಲ್ ನಲ್ಲಿ ಸಂಬಂಧಿಸಿದ ಎಲ್ಲಾ ದಾಖಲೆ ಸಲ್ಲಿಸಬೇಕು. ಎಸ್‌ಎಸ್‌ಎಲ್ಸಿ, ಪಿಯುಸಿ ಅಂಕಪಟ್ಟಿ, ಸಿಇಟಿ ಸಂಖ್ಯೆ, ರೇಷನ್ ಕಾರ್ಡ, ಪದವಿ ಪ್ರಮಾಣ ಪತ್ರ ಅಥವಾ ತಾತ್ಕಾಲಿಕ ಪ್ರಮಾಣ ಪತ್ರ ಸಲ್ಲಿಸಬೇಕು ಎಂದರು.
    ಅಭ್ಯರ್ಥಿಗಳು ಸಕ್ರೀಯವಾಗಿರುವ ಮೊಬೈಲ್ ಸಂಖ್ಯೆ, ಇಮೇಲ್ ದಾಖಲಿಸಿ ಒಟಿಪಿ ಪಡೆದುಕೊಳ್ಳಬೇಕು. ಸಮರ್ಪಕವಾಗಿ ಅರ್ಜಿ ಸಲ್ಲಿಸಿದ ಬಳಿಕ ಸ್ವೀಕೃತಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು ಎಂದರು.
    ಅಭ್ಯರ್ಥಿಯು ಸೇವಾ ಸಿಂಧು ಪೋರ್ಟ್‌ಲ್‌ನಲ್ಲಿ ನಿರುದ್ಯೋಗಿ ಸ್ಥಿತಿಯ ಬಗ್ಗೆ ಪ್ರತಿ ತಿಂಗಳ 25ರಂದು ಅಥವಾ ಮುಂಚಿತವಾಗಿ ಆಧಾರ್ ಒಟಿಪಿ ಮೂಲಕ ಸ್ವಯಂ ೋಷಣೆ ಮಾಡಿಕೊಳ್ಳಬೇಕು ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts