

ಬಂಟ್ವಾಳ: ಮುಂದಿನ ಪೀಳಿಗೆಗೆ ಮಾದರಿಯಾಗುವಂತಹ ಕಾರ್ಯಗಳನ್ನು ಹಮ್ಮಿಕೊಂಡಾಗ ಸದೃಢ ಸಮಾಜ ನಿರ್ಮಿಸಲು ಸಾಧ್ಯ ಎಂದು ನರಿಕೊಂಬು ಶ್ರೀ ನಾಲ್ಕೈತ್ತಾಯ ಪಂಜುರ್ಲಿ ನೇಮೋತ್ಸವ ಸಮಿತಿ ಅಧ್ಯಕ್ಷ ಜಗನ್ನಾಥ ಬಂಗೇರ ನಿರ್ಮಲ್ ಹೇಳಿದರು.
ಯುವವಾಹಿನಿ ಬಂಟ್ವಾಳ ಘಟಕದ 2025-26ನೇ ಸಾಲಿನ ಕಾರ್ಯಕಾರಿ ಸಮಿತಿ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ಕೂಳೂರು ಕಾರ್ಯಕಾರಿ ಸಮಿತಿ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ಸಂಜೀವ ಪೂಜಾರಿ ಯುವ ಸಂಚಯ ವಾರ್ಷಿಕ ವಿಶೇಷಾಂಕ ಬಿಡುಗಡೆಗೊಳಿಸಿದರು. ಯುವವಾಹಿನಿ ಬಂಟ್ವಾಳ ಘಟಕ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಅಧ್ಯಕ್ಷತೆ ವಹಿಸಿದ್ದರು. ಬಿಲ್ಲವ ಬ್ರಿಗೇಡ್ ಸಂಸ್ಥಾಪಕ ಸದಾನಂದ ಪೂಜಾರಿ ಉಪಸ್ಥಿತರಿದ್ದರು.
ಕಥೆ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯದರ್ಶಿ ಚೇತನ್ ಮುಂಡಾಜೆ ವಾರ್ಷಿಕ ವರದಿ ಮಂಡಿಸಿದರು. ಆಯ್ಕೆ ಸಮಿತಿ ಹರೀಶ್ ಕೋಟ್ಯಾನ್ ಕುದನೆ ನೂತನ ಪದಾಧಿಕಾರಿಗಳನ್ನು ಘೋಷಿಸಿದರು. ಯುವ ಸಂಚಯದ ಸಂಪಾದಕ ರಾಜೇಶ್ ಸುವರ್ಣ ವಾರ್ಷಿಕ ವಿಶೇಷಾಂಕ ಪರಿಚಯಿಸಿದರು. ಕಾರ್ಯದರ್ಶಿ ಮಧುಸೂದನ್ ಮದ್ವ ವಂದಿಸಿದರು. ಪ್ರಜ್ಞಾ ಓಡಿಲ್ನಾಳ ಕಾರ್ಯಕ್ರಮ ನಿರೂಪಿಸಿದರು.