

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ಆಲ್ರೌಂಡರ್, ವಿಶ್ವಕಪ್ ವಿಜೇತ ತಂಡದ ಸದಸ್ಯ ಯುವರಾಜ್ ಸಿಂಗ್ ಅವರ ಮನೆಗೆ ಹೊಸ ಅತಿಥಿಯ ಆಗಮನವಾಗಿದ್ದು, ಪತ್ನಿ ಹೇಜಲ್ ಕೀಚ್ ಅವರೊಂದಿಗೆ ಸ್ವಾಗತಿಸಿದ್ದಾರೆ.
ಯುವರಾಜ್ ಸಿಂಗ್ ಅವರ ಪತ್ನಿ ಹೇಜಲ್ ಕೀಚ್ ಆಗಸ್ಟ್ 25ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಈ ಸುದ್ದಿಯನ್ನು ಸ್ವತಃ ಮಾಜಿ ಕ್ರಿಕೆಟಿಗ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಯುವರಾಜ್ ಸಿಂಗ್ ದಂಪತಿಗಳಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.
ನಿದ್ರೆಯಿಲ್ಲದ ರಾತ್ರಿಗಳು ಹೆಚ್ಚು ಸಂತೋಷಕರವಾಗಿದ್ದು, ನಮ್ಮ ಪುಟ್ಟ ರಾಜಕುಮಾರಿ ಔರಾಳನ್ನು ನಾವು ಸ್ವಾಗತಿಸುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ. ದಂಪತಿಗೆ ಒಂದೂವರೆ ವರ್ಷದ ಮಗನಿದ್ದಾನೆ. ಯುವರಾಜ್ ಸಿಂಗ್-ಹೇಜಲ್ ಕೀಚ್ 2016ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.