ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ; ಯುವರಾಜ್​ ಸಿಂಗ್ ಕೊಟ್ಟ ಸ್ಪಷ್ಟನೆ ಹೀಗಿದೆ

yuvraj singh
Published on: 

ಅಮೃತಸರ: ಮುಂದಿನ ಕೆಲವೇ ದಿನಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿದ್ದು, ಅದಕ್ಕೆ ಮುನ್ನುಡಿ ಎಂಬಂತೆ ಮಾಜಿ ಕ್ರಿಕೆಟಿಗರು ಹಾಗೂ ಚಿತ್ರ ನಟರು ರಾಷ್ಟ್ರೀಯ ಪಕ್ಷಗಳನ್ನು ಸೇರುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರವಾಗಿ ಸದ್ದು ಮಾಡಿದ್ದ ಮಾಜಿ ಕ್ರಿಕೆಟಿಗ ಯುವರಾಜ್​ ಸಿಂಗ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪ್ರತಿಕ್ರಿಯಿಸಿರುವ ಯುವರಾಜ್ ಸಿಂಗ್, ನನ್ನ ಮುಖ್ಯ ಉದ್ದೇಶ ಜನರಿಗೆ ಸಹಾಯ ಮಾಡುವುದಾಗಿದೆ. ನನ್ನ ಫೌಂಡೇಶನ್ ಮೂಲಕ ನಾನು ಅದನ್ನು ಮುಂದುವರಿಸುತ್ತೇನೆ ಎಂದು ಹೇಳಿದ್ದಾರೆ.

ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳ ಪ್ರಕಾರ ನಾನು ಗುರುದಾಸ್‌ಪುರದಿಂದ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನನ್ನ ಮುಖ್ಯ ಉದ್ದೇಶ ಜನರಿಗೆ ಸಹಾಯ ಮಾಡುವುದಾಗಿದೆ. ನನ್ನ ಫೌಂಡೇಶನ್ ಮೂಲಕ ನಾನು ಅದನ್ನು ಮುಂದುವರಿಸುತ್ತೇನೆ. ಹೀಗಾಗಿ ನಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ನಾವು ಒಟ್ಟಿಗೆ ಕೆಲಸ ಮುಂದುವರಿಸೋಣ ಎಂದು ಹೇಳಿದ್ಧಾರೆ.

ಕೆಳೆದ ಕೆಲ ದಿನಗಳ ಹಿಂದೆ ಯುವರಾಜ್​ ಸಿಂಗ್ ಕುಟುಂಬಸ್ಥರನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇದರ ಬೆನ್ನಲ್ಲೇ ಯುವರಾಜ್​ ಸಿಂಗ್​ ಬಿಜೆಪಿ ಸೇರ್ಪಡೆಯಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬ ವದಂತಿ ವ್ಯಾಪಕವಾಗಿ ಹರಿದಾಡಲು ಶುರು ಮಾಡಿತ್ತು.