ಚಾಹಲ್​ ಪತ್ನಿಯ ಹಾಟ್​ ಅವತಾರ: ವೈರಲ್​ ಆಗ್ತಿದೆ ಧನಶ್ರೀ ವರ್ಮಾರ ಮಾದಕ ಫೋಟೋಗಳು! Dhanashree Verma

Dhanashree Verma
Published on

Dhanashree Verma : ಟೀಮ್​ ಇಂಡಿಯಾದ ಸ್ಪಿನ್ನರ್​ ಯಜುವೇಂದ್ರ ಚಾಹಲ್ ಬಗ್ಗೆ ಎಲ್ಲರಿಗೂ ತಿಳಿದಿದೆ. ಆದರೆ, ಅವರ ಪತ್ನಿ ಧನಶ್ರೀ ವರ್ಮಾ ಬಗ್ಗೆ ಬಹುತೇಕರಿಗೆ ತಿಳಿದಿಲ್ಲ. ಚಾಹಲ್​ ರೀತಿ ಧನಶ್ರೀ ಕೂಡ ಫೇಮಸ್​. ಸಾಮಾಜಿಕ ಜಾಲತಾಣ ಬಳಸುವವರಿಗೆ ಅವರ ಬಗ್ಗೆ ಚೆನ್ನಾಗಿ ಗೊತ್ತಿರುತ್ತದೆ. ಏಕೆಂದರೆ, ಅವರೊಬ್ಬ ಸೋಶಿಯಲ್​ ಮೀಡಿಯಾ ಸೆನ್ಷೆಷನಲ್​ ಸ್ಟಾರ್​.

ನೃತ್ಯ ಸಂಯೋಜಕಿ ಆಗಿರುವ ಧನಶ್ರೀ ಓರ್ವ ಯೂಟ್ಯೂಬರ್​ ಕೂಡ ಹೌದು. ಯುಟ್ಯೂಬ್​ನಲ್ಲಿ ವಿವಿಧ ಡ್ಯಾನ್ಸ್​ ವಿಡಿಯೋಗಳನ್ನು ಅಪ್​ಲೋಡ್​ ಮಾಡುತ್ತ ಗಮನ ಸೆಳೆಯುತ್ತ ಬಂದಿರುವ ಧನಶ್ರೀ ಇದೀಗ ಹಾಟ್​ ಫೋಟೋಗಳನ್ನು ಹರಿಬಿಡುವ ಮೂಲಕ ಜಾಲತಾಣದಲ್ಲಿ ಮತ್ತೆ ಸದ್ದು ಮಾಡುತ್ತಿದ್ದಾರೆ.

ಕಪ್ಪು ಬಣ್ಣದ ಉಡುಗೆ ಧರಿಸಿರುವ ಧನಶ್ರೀ ತುಂಬಾ ಬೋಲ್ಡ್​ ಆಗಿ ಕಾಣಿಸುತ್ತಿದ್ದಾರೆ. ಅಲ್ಲದೆ, ಮಾದಕ ಭಂಗಿಯಲ್ಲಿ ಕ್ಯಾಮೆರಾಗೆ ಪೋಸ್​ ನೀಡುವ ಮೂಲಕ ಪಡ್ಡೆ ಹುಡುಗರ ಮೈ ಬಿಸಿಯೇರಿಸಿದ್ದಾರೆ. ಎರಡು ದಿನಗಳ ಹಿಂದಷ್ಟೇ ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಹಾಟ್​ ಫೋಟೋಗಳಿಗೆ ಈವರೆಗೆ 4 ಲಕ್ಷಕ್ಕೂ ಅಧಿಕ ಲೈಕ್ಸ್​ ಬಂದಿವೆ.

ಅಂದಹಾಗೆ ಆರಂಭದಲ್ಲಿ ಯೂಟ್ಯೂಬರ್ ಆಗಿ ಗುರುತಿಸಿಕೊಂಡಿದ್ದ ಧನಶ್ರೀ ನಂತರ ಬಾಲಿವುಡ್ ಟಿವಿ ರಿಯಾಲಿಟಿ ಶೋಗಳಲ್ಲಿ ಭಾಗವಹಿಸುವ ಮೂಲಕ ವಿಶೇಷ ಕ್ರೇಜ್ ಗಳಿಸಿದರು. ಬಾಲಿವುಡ್‌ನಲ್ಲಿ ನಾಯಕಿಯಾಗಲು ಸಾಕಷ್ಟು ಪ್ರಯತ್ನಿಸುತ್ತಿದ್ದಾರೆ. ನಿಯಮಿತವಾಗಿ ತನ್ನ ಹಾಟ್ ಫೋಟೋಗಳನ್ನು ಪೋಸ್ಟ್​ ಮಾಡುವ ಮೂಲಕ ಬಾಲಿವುಡ್ ಪ್ರೇಕ್ಷಕರನ್ನು ಬೆರಗುಗೊಳಿಸುತ್ತಿರುತ್ತಾರೆ.

ಹಾಲಿನಂಥ ಬಿಳಿ ಮೈಬಣ್ಣದ ಧನಶ್ರೀ ವರ್ಮಾ, ಕಪ್ಪು ಬಣ್ಣದ ಡ್ರೆಸ್ ಧರಿಸಿ ಮನಮೋಹಕ ಕಣ್ಣುಗಳಿಂದ ನೋಡುತ್ತಿರುವ ಫೋಟೋಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ನೀನು ನೀಳಕಾಲಿನ ಚೆಲುವೆ.. ನಮ್ಮ ಹೃದಯ ಕದ್ದವಳು ಎಂದು ಕೆಲ ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ.

ಇನ್ನು ಕಳೆದ ಕೆಲ ದಿನಗಳಿಂದ ಈ ನಟಿ ಟಾಲಿವುಡ್ ಗೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಇದು ಎಷ್ಟು ನಿಜ ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net