

ಬೆಂಗಳೂರು: ಕಲ್ಟ್ ಚಿತ್ರತಂಡದ (Cult Cinema) ಯಡವಟ್ಟಿನಿಂದಾಗಿ ಸಚಿವ ಜಮೀರ್ ಅಹ್ಮದ್ ಪುತ್ರ ಜೈದ್ ಖಾನ್ ವಿರುದ್ಧ ಮಾಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಡೆದಿದ್ದೇನು?: ‘ಬನಾರಸ್ ಸಿನಿಮಾ ಮೂಲಕವಾಗಿ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಟ್ಟ ನಟ ಜೈದ್ ಖಾನ್. ಇವರ ಮುಂದಿನ ಸಿನಿಮಾ ಕಲ್ಟ್ ಸಿನಿಮಾ ಶೂಟಿಂಗ್ ಕೆಲಸ ಈಗಾಗಲೇ ಭರ್ಜರಿಯಾಗಿ ನಡೆಯುತ್ತಿದೆ. ಕಲ್ಟ್ ಚಿತ್ರಕ್ಕೆ ಸಂತೋಷ್ ಎನ್ನುವವರು ಡ್ರೋನ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ಹಲವು ಸಿನಿಮಾಗಳಿಗೆ ಡ್ರೋನ್ ಟೆಕ್ನಿಷಿಯನ್ ಆಗಿ ಕೆಲಸ ಮಾಡಿರುವ ಸಂತೋಷ್ ಸ್ವಂತವಾಗಿ ಡ್ರೋನ್ ಹೊಂದಿದ್ದರು. 25 ಲಕ್ಷ ರೂ. ಸಾಲಸೋಲ ಮಾಡಿ ಡ್ರೋನ್ ಖರೀದಿಸಿದ್ದ ಸಂತೋಷ್ ಸಿನಿಮಾ ಶೂಟಿಂಗ್ಗಾಗಿ ದಿನಕ್ಕೆ 25,000 ರೂ. ಚಾರ್ಜ್ ಮಾಡುತ್ತಿದ್ದರು. ಡ್ರೋನ್ನಲ್ಲಿ ಚಿತ್ರೀಕರಣ ಮಾಡುವುದು ರಿಸ್ಕ್ ಇದೆ ಅಂತ ಎಚ್ಚರಿಕೆ ಕೊಟ್ಟಿದ್ದರೂ ನಿರ್ದೇಶಕ ಮಾಡಲೇಬೇಕು ಎಂದು ಒತ್ತಾಯ ಮಾಡಿದ್ರು ಎನ್ನಲಾಗಿದೆ. ಶೂಟಿಂಗ್ ವೇಳೆ ಡ್ರೋನ್ ವಿಂಡ್ ಫ್ಯಾನ್ಗೆ ಟಚ್ ಆಗಿ ಪೀಸ್ ಪೀಸ್ ಆಗಿತ್ತು. ಇದಾದ ಬಳಿಕ ಸಂತೋಷ್ಗೆ ಕೊಂಚವೂ ನಷ್ಟ ಕಟ್ಟಿಕೊಟ್ಟಿರಲಿಲ್ಲ ಚಿತ್ರತಂಡ. ಸಂತೋಷ್ ಜೈದ್ ಬಳಿಯೇ ಪರಿಹಾರ ನೀಡುವಂತೆ ಕೇಳಿಕೊಂಡಿದ್ದ. ಆದ್ರೆ ಸಂತೋಷ್ ಬಳಿ ವೈಟ್ ಪೇಪರ್ ಮೇಲೆ ಜೈದ್ ಸಹಿ ಮಾಡಿಸಿಕೊಂಡು, ಒಂದೂವರೆ ಲಕ್ಷ ರೂ. ಮೌಲ್ಯದ ಫುಟೇಜ್ ರೆಕಾರ್ಡಿಂಗ್ ಆಗಿದ್ದ ಮೆಮೊರಿ ಕಾರ್ಡ್ ಕಿತ್ತುಕೊಂಡು, ಆಧಾರ್ ಕಾರ್ಡ್ ನಂಬರ್ ಸಹ ಬರೆಸಿಕೊಂಡು ಅವಮಾನ ಮಾಡಿದ್ದಾರೆ.
ಈ ಎಲ್ಲಾ ವಿಚಾರಗಳಿಂದ ಮನನೊಂದ ಸಂತೋಷ್ ಫ್ಯಾನ್ಗೆ ನೇಣು ಬಿಗಿದುಕೊಂಡು ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ . ಆಸ್ಪತ್ರೆಯ ಮೇಮೊ ಮೇಲೆ ಎನ್ಸಿಆರ್ ದಾಖಲಾಗಿದೆ. ಕೂಡಲೇ ಎಚ್ಚೆತ್ತ ಪೊಲೀಸರು ʻಕಲ್ಟ್ʼ ಚಿತ್ರತಂಡವನ್ನ ಸಂಪರ್ಕಿಸಿದ್ದಾರೆ. ಘಟನೆ ಸಂಬಂಧ ಸಿನಿಮಾ ನಿರ್ದೇಶಕನಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ವಿಚಾರಣೆಗೆ ಬರುವಂತೆ ಚಿತ್ರತಂಡಕ್ಕೆ ಪೊಲೀಸರು ಸೂಚನೆ ನೀಡಿದ್ದಾರೆ.