25.7 C
Bangalore
Sunday, December 15, 2019

ಮಲೇಷ್ಯಾದಲ್ಲೂ ಜನಾಂಗೀಯ ದ್ವೇಷ ಭಾಷಣ ಮಾಡಿರುವ ಝಾಕಿರ್​ ನಾಯ್ಕ್​ಗೆ ಸಂಕಷ್ಟ, ಎರಡನೇ ಬಾರಿ ಸಮನ್ಸ್​ ಜಾರಿ

Latest News

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ಮಸ್ಕಿ ಕ್ಷೇತ್ರಕ್ಕೆ ಇನ್ನೆರಡು ತಿಂಗಳಲ್ಲಿ ಉಪಚುನಾವಣೆ ಸಾಧ್ಯತೆ – ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್

ಮಸ್ಕಿ: ಬಿಜೆಪಿ ಸೇರಿದ ಮೇಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ. ಈಗಾಗಲೇ 50 ಕೋಟಿ ರೂ....

ಕೌಲಾಲಂಪುರ: ವಿವಾದಾತ್ಮಕ ಧರ್ಮ ಪ್ರಚಾರಕ ಝಾಕಿರ್​ ನಾಯ್ಕ್​ ಮಲೇಷ್ಯಾದಲ್ಲಿರುವ ಹಿಂದುಗಳು ಮತ್ತು ಚೀನೀಯರ ಕುರಿತು ಜನಾಂಗೀಯ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದಾನೆ. ಆತನ ವಿರುದ್ಧ ಪ್ರಕರಣ ದಾಖಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಎರಡನೇ ಬಾರಿಗೆ ಸಮನ್ಸ್​ ನೀಡಲಾಗಿದೆ.

ಆಗಸ್ಟ್​ 3 ರಂದು ಕೋಟ ಬರುವಿನಲ್ಲಿ ತಮ್ಮನ್ನು ಭಾರತಕ್ಕೆ ಗಡೀಪಾರು ಮಾಡಬೇಕು ಎಂಬ ಒತ್ತಡ ಇದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಝಾಕಿರ್​ ನಾಯ್ಕ್​, ಮಲೇಷ್ಯಾದಲ್ಲಿರುವ ಚೀನೀಯರು ಮೊದಲು ತಮ್ಮ ದೇಶಕ್ಕೆ ತೆರಳಬೇಕು. ಏಕೆಂದರೆ ಅವರು ಈ ದೇಶದ ಅತ್ಯಂತ ಹಳೆಯ ಅತಿಥಿಗಳು ಎಂದು ತಿಳಿಸದ್ದ. ಜತೆಗೆ ಇದೇ ವೇಳೆ ಮಲೇಷ್ಯಾದಲ್ಲಿರುವ ಹಿಂದುಗಳು ಭಾರತದಲ್ಲಿರುವ ಮುಸ್ಲಿಮರಿಗಿಂತ 100 ಪಟ್ಟು ಹೆಚ್ಚು ಹಕ್ಕುಗಳನ್ನು ಹೊಂದಿದ್ದಾರೆ. ಆದರೂ ಇಲ್ಲಿರುವ ಹಿಂದುಗಳು ಮಲೇಷ್ಯಾ ಸರ್ಕಾರಕ್ಕಿಂತ ಭಾರತ ಸರ್ಕಾರವನ್ನು ಹೆಚ್ಚು ನಂಬುತ್ತಾರೆ ಎಂದು ಝಾಕಿರ್​ ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿದ್ದವು.

ಈ ಹಿನ್ನೆಲೆಯಲ್ಲಿ ಝಾಕಿರ್​ ನಾಯ್ಕ್​ ವಿರುದ್ಧ ಜನಾಂಗೀಯ ನಿಂದನೆಯ ಪ್ರಕರಣ ದಾಖಲಾಗಿದೆ. ಆಗಸ್ಟ್​ 16 ರಂದು ನಾಯಕ್​ ಮಲೇಷ್ಯಾ ಪೊಲೀಸರ ಸಮ್ಮುಖ ಹಾಜರಾಗಿ ತನ್ನ ಹೇಳಿಕೆ ದಾಖಲಿಸಿದ್ದ. ಈಗ ಮತ್ತೊಮ್ಮೆ ಸಮನ್ಸ್​ ನೀಡಲಾಗಿದ್ದು, ವಿಚಾರಣೆ ಹಾಜರಾಗುವಂತೆ ಸೂಚಿಸಲಾಗಿದೆ.

ಇದರ ಜತೆಯಲ್ಲೇ ಝಾಕಿರ್​ ನಾಯ್ಕ್​ ತಮ್ಮ ದೇಶದಲ್ಲಿ ಯಾವುದೇ ಅಪರಾಧ ಎಸಗಿಲ್ಲ, ಹಾಗಾಗಿ ಆತನನ್ನು ಭಾರತಕ್ಕೆ ಗಡೀಪಾರು ಮಾಡಲು ಸಾಧ್ಯವಿಲ್ಲ ಎಂದು ಈ ಹಿಂದೆ ಹೇಳಿಕೆ ನೀಡಿದ್ದ ಮಲೇಷ್ಯಾ ಪ್ರಧಾನ ಮಂತ್ರಿ ಮಹತಿರ್ ಮೊಹಮದ್ ಈಗ ಝಾಕಿರ್​ ನಾಯ್ಕ್​ ವಿರುದ್ಧ ಕಿಡಿ ಕಾರಿದ್ದಾರೆ.

ಭಾನುವಾರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದ ಮಹತಿರ್​, ಆಕಿರ್​ ನಾಯ್ಕ್​ ಜನಾಂಗೀಯ ರಾಜಕೀಯದಲ್ಲಿ ಭಾಗಿಯಾಗಲು ಪ್ರಯತ್ನಿಸುತ್ತಿದ್ದಾರೆ. ಜನಾಂಗೀಯ ಭಾವನೆಗಳನ್ನು ಕಲಕುತ್ತಿದ್ದಾರೆ. ಈ ವಿಷಯದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನೀವು ಧರ್ಮ ಬೋಧನೆ ಮಾಡಬಹುದು. ಆದರೆ, ಆತ ಧರ್ಮ ಬೋಧನೆ ಮಾಡುತ್ತಿಲ್ಲ. ಆತ ಚೀನೀಯರು ಚೀನಾಗೆ ಮತ್ತು ಭಾರತೀಯರುವ ಭಾರತಕ್ಕೆ ವಾಪಸ್​ ಹೋಗಬೇಕು ಎಂದು ತಿಳಿಸುತ್ತಿದ್ದಾನೆ. ನಾನು ಎಂದಿಗೂ ಹೀಗೆ ಹೇಳಿಲ್ಲ. ಆದರೆ, ಝಾಕಿರ್​ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಇದು ಆತನ ರಾಜಕೀಯದ ಒಂದು ಭಾಗ ಎಂದು ತಿಳಿಸಿದ್ದರು.

ದ್ವೇಷ ಭಾಷಣ, ಉಗ್ರವಾದಕ್ಕೆ ಪ್ರಚೋದನೆ ನೀಡುವುದು ಮತ್ತು ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವು ಪ್ರಕರಣಗಳನ್ನು ಎದುರಿಸುತ್ತಿರುವ ಝಾಕಿರ್​ ನಾಯ್ಕ್​ 2016ರಲ್ಲಿ ಭಾರತವನ್ನು ತೊರೆದಿದ್ದ. ಆ ನಂತರ ಆತ ಮುಸ್ಲಿಂ ಸಮುದಾಯ ಹೆಚ್ಚಾಗಿರುವ ಮಲೇಷ್ಯಾದಲ್ಲಿ ಆಶ್ರಯ ಪಡೆದಿದ್ದ. ಆ ನಂತರ ಮಲೇಷ್ಯಾ ಝಾಕಿರ್​ ನಾಯ್ಕ್​ಗೆ ಶಾಶ್ವತ ಪೌರತ್ವವನ್ನು ನೀಡಿತ್ತು. (ಏಜೆನ್ಸೀಸ್​)

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...