'ಒಂದೊಂದು ಯೋಜನೆ ವರ್ಷಗಳ ಕಾಲ ವಿಳಂಬಗೊಂಡರೆ ಬಡವರಿಗೆ ಸೂರು ಕಲ್ಪಿಸಲಾಗುವುದಿಲ್ಲ'; ಅಧಿಕಾರಿಗಳಿಗೆ ಜಮೀರ್ ಅಹಮದ್ ಗಡುವು

zameer ahmed
Published on

ಬೆಂಗಳೂರು: ಬಡವರಿಗಾಗಿ ರೂಪಿಸಿರುವ ವಸತಿ ಯೋಜನೆಗಳನ್ನು ಪೂರ್ಣಗೊಳಿಸಲು ನಿಗದಿತ ಕಾಲಮಿತಿ ಹಾಕಿಕೊಳ್ಳಬೇಕು ಎಂದು ವಸತಿ ಸಚಿವ ಜಮೀರ್ ಅಹಮದ್(Zameer Ahmed) ಅಧಿಕಾರಿಗಳಿಗೆ ಗಡುವು(Deadline) ನೀಡಿದ್ದಾರೆ.

"ವಸತಿ ಇಲಾಖೆಯ ವ್ಯಾಪ್ತಿಗೆ ಬರುವ ರಾಜೀವ್ ಗಾಂಧಿ ವಸತಿ ನಿಗಮದ ಪ್ರಗತಿ ಪರಿಶೀಲನೆ ನಡೆಸಿ ಒಂದೊಂದು ಯೋಜನೆ ವರ್ಷಗಳ ಕಾಲ ವಿಳಂಬವಾದರೆ ಬಡವರಿಗೆ ಸೂರು ನಿರ್ಮಿಸಿಕೊಡುವ ಉದ್ದೇಶ ಪೂರ್ಣಗೊಳ್ಳುವುದಿಲ್ಲ! ಯಾವುದೇ ಕಾರಣಕ್ಕೂ ವಿಳಂಬ ಸಹಿಸುವುದಿಲ್ಲ" ಎಂದು ಸಚಿವರು ಹೇಳಿದ್ದಾರೆ.

"ಒಂದೊಂದು ಯೋಜನೆಗೆ ನಿಗದಿತ ಕಾಲಮಿತಿ ಅನ್ನು ರೂಪಿಸಿಕೊಂಡು ಅದನ್ನು ಪೂರ್ಣಗೊಳಿಸಿದ ಬಳಿಕವೇ ಮತ್ತೊಂದು ಯೋಜನೆಯನ್ನು ಕೈಗೆತ್ತಿಕೊಳ್ಳಬೇಕು. ಪ್ರದಾನಮಂತ್ರಿ ಆವಾಸ್ ಯೋಜನೆಯ(Pradhanmantri aawas yojana) ಅವಧಿ ಜೂನ್ ತಿಂಗಳಿಗೆ ಅಂತ್ಯವಾಗಲಿದ್ದು, 1.41 ಕೋಟಿ ಮನೆಗಳ ಗುರಿಯ ಪೈಕಿ 37,000 ಮನೆಗಳಿಗೆ ಮಾತ್ರ ಅನುಮತಿ ದೊರೆತಿದೆ" ಎಂದು ಹೇಳಿದರು.

"ಚುನಾವಣೆ ಮತ್ತಿತ್ತರ ಕಾರಣಗಳಿಂದ ತಡವಾಗಿದ್ದರೆ ತಕ್ಷಣ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಸಮಯ ವಿಸ್ತರಣೆಗೆ ಅನುಮತಿ ಕೋರಿ. ಅಗತ್ಯವಾದರೆ ದೆಹಲಿಗೆ ತೆರಳಿ ಕೇಂದ್ರ ಸಚಿವರ ಜತೆಯೂ ಚರ್ಚೆಸುತ್ತೇನೆ" ಎಂದು ಸಚಿವ ಜಮೀರ್ ಅಹಮದ್ ಅಧಿಕಾರಿಗಳಿಗೆ ಹೇಳಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net