

ಬೆಂಗಳೂರು: ಸಿದ್ದರಾಮಯ್ಯ ಸಿಎಂ ಆಗಬೇಕು, ಇದು ಜನರ ಅಭಿಪ್ರಾಯ. ಜನ ಅಭಿಪ್ರಾಯವೇ ನನ್ನ ಅಭಿಪ್ರಾಯ, ಸಿದ್ದರಾಮಯ್ಯ ಸಿಎಂ ಆದ್ರೆ ಎಲ್ಲರಿಗೂ ಒಳ್ಳೆಯದಾಗುತ್ತೆ ಎಂದು ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹೇಳಿದ್ದಾರೆ.
ಸಿದ್ದರಾಮಯ್ಯ ಬಡವರು ಮತ್ತು ದಿನ ದಲಿತರ ಹಾಗೂ ಎಲ್ಲ ವರ್ಗದ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಇಂತಹ ನಾಯಕ ಮತ್ತೊಮ್ಮೆ ಸಿಎಂ ಆಗಬೇಕು. ಸಿದ್ದರಾಮಯ್ಯ ನಮ್ಮ ನಾಯಕ. ಅವರೇ ಸಿಎಂ ಆಗಬೇಕು ಎಂದರು.
ರಾಜ್ಯದ ಜನತೆ ಅನುಕೂಲ ಆಗಲು ಸಿದ್ದರಾಮಯ್ಯ ಸಿಎಂ ಅಭ್ಯರ್ಥಿ ಎಂದು ಘೋಷಣೆ ಆಗಲೇಬೇಕು. ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆಗೆ ಹೋದ್ರೆ 130-150 ಸ್ಥಾನ ಬರುವುದು ಖಚಿತ ಎಂದು ಹೇಳಿದರು.