

ಬೆಂಗಳೂರು: ಕೆಜಿ ಹಳ್ಳಿ, ಡಿಜೆ ಹಳ್ಳಿ ಹಾಗೂ ಕಾವಲ್ ಭೈರಸಂದ್ರದಲ್ಲಿ ಮೊನ್ನೆ ರಾತ್ರಿ ನಡೆದ ದಾಂಧಲೆ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವರೂ ಆದ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್, 'ಪ್ರವಾದಿ ಮಹಮ್ಮದ್ ಪೈಗಂಬರರನ್ನು ವ್ಯಕ್ತಿಯೊಬ್ಬ ನಿಂದಿಸಿರುವುದು ವೈಯಕ್ತಿಕವಾಗಿ ನನಗೂ ಸಾಕಷ್ಟು ನೋವಾಗಿದೆ. ನಮ್ಮ ನೋವು, ಆಕ್ರೋಶವನ್ನು ಕಾನೂನು ಹೋರಾಟದ ಮೂಲಕದ ತೋರಿಸಿ, ಕಠಿಣ ಶಿಕ್ಷೆಗೆ ಆಗ್ರಹಿಸಬೇಕೇ ಹೊರತು ಅಶಾಂತಿಯ ಮೂಲಕವಲ್ಲ. ನ್ಯಾಯಕ್ಕಾಗಿ ನಡೆಸುವ ಕಾನೂನು ಹೋರಾಟದಲ್ಲಿ ನಾನೂ ನಿಮ್ಮ ಜೊತೆಗಿರುತ್ತೇನೆ' ಎಂದಿದ್ದಾರೆ.
ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೊನ್ನೆ(ಮಂಗಳವಾರ) ರಾತ್ರಿ ಹಿಂಸಾಚಾರ ಭುಗಿಲೆದ್ದಿತ್ತು. ಉದ್ರಿಕ್ತ ಗುಂಪು ಕಾಂಗ್ರೆಸ್ ಶಾಸಕ
'ಬೆಂಗಳೂರಿನಲ್ಲಿನ ಹಿಂಸಾಚಾರ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಧಾರ್ಮಿಕ ಮುಖಂಡರೊಂದಿಗೆ ಚರ್ಚೆ ಮಾಡಿದ್ದೇನೆ. ತಪ್ಪಿತಸ್ಥರಿಗೆ ಖಂಡಿತಾ ಕಠಿಣ ಶಿಕ್ಷೆ ಆಗಲಿದೆ. ಗಾಳಿ ಸುದ್ದಿಗಳಿಗೆ ಕಿವಿ ಕೊಡಬೇಡಿ, ಕಾನೂನು ಹೋರಾಟದ ಮೂಲಕ ನ್ಯಾಯ ಪಡೆಯುವ ನಮ್ಮ ನಿರ್ಧಾರ ಅಚಲವಾಗಿರಲಿ. ಶಾಂತಿ, ಸೌಹಾರ್ದತೆಗೆ ಎಲ್ಲರೂ ಸಹಕರಿಸುವಂತೆ ಕೈ ಮುಗಿದ್ದು ಮನವಿ ಮಾಡುತ್ತೇನೆ' ಎಂದು ಜಮೀರ್ ಅಹ್ಮದ್ ಸರಣಿ ಟ್ವೀಟ್ ಮಾಡಿದ್ದಾರೆ.
ಕೆಜಿ ಹಳ್ಳಿ, ಡಿಜೆ ಹಳ್ಳಿ ಹಾಗೂ ಕಾವಲ್ ಭೈರಸಂದ್ರದ ಗಲಭೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಈಗಾಗಲೇ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದೆ. ಗಲಭೆಕೋರರಿಂದಲೇ ನಷ್ಟ ವಸೂಲು ಮಾಡುವುದಾಗಿ ಸರ್ಕಾರ ಹೇಳಿದೆ.