ಯುವತಿಯನ್ನು ಬೆಂಗಳೂರಿಗೆ ಕರೆದೊಯ್ಯಲು 3 ಆ್ಯಂಬುಲೆನ್ಸ್, ಶಿವಮೊಗ್ಗದಿಂದಲೇ ಜೀರೋ ಟ್ರಾಫಿಕ್​!

Revathi
Published on

ಶಿವಮೊಗ್ಗ: ಯುವತಿಯೊಬ್ಬಳನ್ನು ಶಿವಮೊಗ್ಗದಿಂದ ಬೆಂಗಳೂರಿಗೆ ಕರೆದೊಯ್ಯಲು ಜೀರೋ ಟ್ರಾಫಿಕ್ ಮಾಡಿರುವುದು ನಗರದಲ್ಲಿಂದು ಗಮನ ಸೆಳೆದಿದೆ. ಶಿವಮೊಗ್ಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿಯೊಬ್ಬಳನ್ನು ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲು ಈ ವಿಶೇಷ ವ್ಯವಸ್ಥೆ ಮಾಡಲಾಗಿತ್ತು.

ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭದ್ರಾವತಿಯ 18 ವರ್ಷದ ಯುವತಿಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸಂಬಂಧಪಟ್ಟವರು ಇಂದು ಶಿವಮೊಗ್ಗದಿಂದ ಹೊರಟಿದ್ದಾರೆ.

ಪಿತ್ತಜನಕಾಂಗದ ಸಮಸ್ಯೆಯಿಂದ ಬಳಲುತ್ತಿದ್ದ ಈಕೆಯನ್ನು ಬೆಂಗಳೂರಿನಲ್ಲಿ ಹೆಚ್ಚಿನ ಚಿಕಿತ್ಸೆ ಕೊಡಿಸುವ ಸಲುವಾಗಿ ಶಿಫ್ಟ್ ಮಾಡಲಾಗುತ್ತಿದೆ. ಅದಕ್ಕಾಗಿ ಮೂರು ಆ್ಯಂಬುಲೆನ್ಸ್​ಗಳ ಬಳಸಿದ್ದಲ್ಲದೆ, ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿರುವುದರಿಂದ ಈ ಪ್ರಕರಣ ಗಮನ ಸೆಳೆದಿದ್ದು, ಕುತೂಹಲವನ್ನು ಕೂಡ ಮೂಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net