More

    ಬೆಂಗ್ಳೂರು ಪಕ್ಕದ ಚಿಕ್ಕಬಳ್ಳಾಪುರದಲ್ಲಿ ಜಿಕಾ ವೈರಸ್ ಪತ್ತೆ: ರೋಗಲಕ್ಷಣಗಳೇನು? ಮುನ್ನೆಚ್ಚರಿಕೆ ಹೀಗಿರಲಿ….

    ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಹೋಬಳಿಯ ತಲಕಾಯಲಬೆಟ್ಟ ಗ್ರಾಮದ ವ್ಯಾಪ್ತಿಯಲ್ಲಿ ಮಾರಕ ಜಿಕಾ ವೈರಸ್ ಪತ್ತೆಯಾಗಿದೆ.

    ಇತ್ತೀಚೆಗೆ ಕೇರಳದಲ್ಲಿ ಕಾಣಿಸಿಕೊಂಡಿದ್ದ ಈ ವೈರಸ್ ಈಗ ಆಂಧ್ರದ ಗಡಿಯಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾಣಿಸಿಕೊಂಡಿರುವುದು ಜನರಲ್ಲಿ ತೀವ್ರ ಆತಂಕ ಉಂಟು ಮಾಡಿದೆ.

    ಆರೋಗ್ಯ ಇಲಾಖೆಯ ಅಧಿಕಾರಿಗಳು ಸೊಳ್ಳೆಗಳನ್ನು ಹಿಡಿದು ಪರೀಕ್ಷೆಗೆ ಒಳಪಡಿಸಿದಾಗ ಜಿಕಾ ವೈರಸ್‌ ಪತ್ತೆಯಾಗಿದೆ. ಅದೃಷ್ಟವಶಾತ್ ಜನರಿಗೆ ಹರಡಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಸ್.ಮಹೇಶ ಕುಮಾರ್ ತಿಳಿಸಿದರು.

    ಸದ್ಯ ಜಿಕಾ ವೈರಸ್ ಕಂಡುಬಂದಿರುವ ತಲಕಾಯಲಬೆಟ್ಟ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆರೋಗ್ಯ ಇಲಾಖೆ ತಂಡ ಬೀಡು ಬಿಟ್ಟು, ಮನೆ ಮನೆ ಸಮೀಕ್ಷೆ, ರಕ್ತ ಸಂಗ್ರಹ ಜೊತೆಗೆ ವೈರಸ್ ಹರದಡಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

    ಭಯಬೇಡ ಎಚ್ಚರವಿರಲಿ
    ಜಿಕಾ ಎಂಬುದು ಒಂದು ವೈರಸ್ ಸೋಂಕು. ಡೆಂಘೆ, ಚಿಕೂನ್ ಗುನ್ಯಾ ರೋಗ ಹರಡುವ ಈಡಿಸ್ ಜಾತಿಯ ಸೊಳ್ಳೆಗಳು ಈ ಜಿಕಾ ವೈರಸ್ ಸೋಂಕನ್ನು ಸಹ ಹರಡುತ್ತವೆ. ಈಡಿಸ್‌ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ನಿಂತ ನೀರು ಸೊಳ್ಳೆಗಳ ಉತ್ಪತ್ತಿ ತಾಣಗಳು ಎಂಬುದನ್ನು ಮರೆಯಬೇಡಿ.

    ಜಿಕಾ ವೈರಸ್ ತಾಯಿಯಿಂದ ಮಗುವಿಗೆ ಗರ್ಭಾವಸ್ಥೆಯಲ್ಲಿ ಹಾಗೂ ಜನನದ ನಂತರ ಕೂಡ ಹರಡಬಹುದು. ಗರ್ಭಾವಸ್ಥೆಯಲ್ಲಿ ಹರಡುವ ಈ ಸೋಂಕು ಹುಟ್ಟಲಿರುವ ಮಗುವಿನ ಮೆದುಳು ಮತ್ತು ನರಮಂಡಲದಲ್ಲಿ ಸಮಸ್ಯೆ ಉಂಟು ಮಾಡಬಹುದು. ಇದರಿಂದ ಹುಟ್ಟುವ ಮಗುವಿಗೆ ಮಾನಸಿಕ ಹಾಗೂ ಶಾರೀರಿಕ ಸಮಸ್ಯೆಗಳು ತಲೆದೋರಬಹುದು.

    ರೋಗ ಲಕ್ಷಣಗಳು ಏನು?
    * ಕಣ್ಣು ಕೆಂಪಾಗುವಿಕೆ
    * ತಲೆ ನೋವು
    * ಜ್ವರ
    * ಕೀಲುಗಳಲ್ಲಿ ನೋವು
    * ಗಂಧೆಗಳು
    * ಸ್ನಾಯುಗಳಲ್ಲಿ ನೋವು

    ನಿಯಂತ್ರಣ ನಮ್ಮೆಲ್ಲರ ಜವಾಬ್ದಾರಿ
    * ನೀರು ಶೇಖರಣಾ ಪರಿಕರಗಳನ್ನು ಮುಚ್ಚಳದಿಂದ ಮುಚ್ಚಿಡಿ ಮತ್ತು ವಾರಕ್ಕೊಮ್ಮೆ ಸ್ವಚ್ಛಗೊಳಿಸಿ.
    * ಮನೆಯ ಸುತ್ತ-ಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಿ ಹಾಗೂ ಘನತ್ಯಾಜ್ಯ ವಸ್ತುಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಿ.
    * ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಿ, ಮಕ್ಕಳು, ವಯೋವೃದ್ದರು ವಿಶ್ರಾಂತಿ ಪಡೆಯುವಾಗ ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಬಳಸಿ.
    * ಸೊಳ್ಳೆಗಳು ಸಾಮಾನ್ಯವಾಗಿ ಸಂತಾನೋತ್ಪತ್ತಿ ಮಾಡುವುದು ನಿಂತ ನೀರಲ್ಲಿ. ಹೀಗಾಗಿ ಮನೆಯ ಸುತ್ತಲೂ ನೀರು ನಿಲ್ಲದಂತೆ ಮುಂಜಾಗ್ರತೆ ವಹಿಸಬೇಕು. ಪ್ರತಿಯೊಬ್ಬ ವ್ಯಕ್ತಿಯೂ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ, ವೈರಸ್ ಹರಡುವ ಸಾಧ್ಯತೆ ಕಡಿಮೆಯಾಗುತ್ತೆ.

    ರೋಗ ಲಕ್ಷಣಗಳು ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2 ರಿಂದ 7 ದಿನಗಳವರೆಗೆ ಇರುತ್ತದೆ. ಗರ್ಭಿಣಿಯರು ವಿಶೇಷವಾಗಿ ಎಚ್ಚರಿಕೆ ವಹಿಸಬೇಕು. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ಯಾವುದೇ ರೋಗ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆ/ವೈದ್ಯರನ್ನು ಸಂಪರ್ಕ ಮಾಡಿ.

    ಭಾರತ, ಯುರೋಪಿಯನ್ ಯೂನಿಯನ್ ಸೇರಿದಂತೆ 27 ದೇಶಗಳು AI ಅಪಾಯಗಳ ಬಗ್ಗೆ ಒಪ್ಪಿಕೊಂಡಿವೆ; ಮೊದಲ ಅಂತರರಾಷ್ಟ್ರೀಯ ಘೋಷಣೆಗೆ ಸಹಿ

    ರೀಲ್ಸ್​ ಹುಚ್ಚಾಟ! ಸಾರ್ವಜನಿಕ ಪ್ರದೇಶದಲ್ಲಿ ಅನುಚಿತವಾಗಿ ವರ್ತಿಸಿದ ಜೋಡಿಗೆ ಎದುರಾಯ್ತು ಸಂಕಷ್ಟ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts