More

    ರಾಜ್ಯದಲ್ಲಿ ಝಿಕಾ ವೈರಾಣು ಪತ್ತೆಯಾಗಿಲ್ಲ :ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

    ಬೆಂಗಳೂರು: ರಾಜ್ಯದಲ್ಲಿ ಈವರೆಗೂ ಯಾವುದೇ ವ್ಯಕ್ತಿಯಲ್ಲಿ ಝಿಕಾ ವೈರಾಣು ಪತ್ತೆಯಾಗಿಲ್ಲ. ಚಿಕ್ಕಬಳ್ಳಾಪುರದಲ್ಲಿ ಸೊಳ್ಳೆಗಳಲ್ಲಿ ಮಾತ್ರ ವೈರಾಣು ದೃಢಪಟ್ಟಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

    ಚಿಕ್ಕಬಳ್ಳಾಪುರದಲ್ಲಿ ಸೊಳ್ಳೆಗಳಲ್ಲಿ ಝಿಕಾ ವೈರಾಣು ಇರುವ ಬಗ್ಗೆ 10 ದಿನಗಳ ಹಿಂದೆಯೇ ಪ್ರಯೋಗಾಲಯದ ವರದಿ ಬಂದಿದೆ. ಆ ಭಾಗದಲ್ಲಿ ಜ್ವರ ಕಾಣಿಸಿಕೊಂಡು, ಆಸ್ಪತ್ರೆಗೆ ದಾಖಲಾದವರ ಮಾದರಿಯನ್ನು ಎನ್‌ಐವಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಮೂರು ದಿನಗಳಲ್ಲಿ ವರದಿ ಬರುವ ಸಾಧ್ಯತೆಯಿದೆ. ವೈರಾಣು ತಡೆಗೆ ಸಂಬಂಧಿಸಿದಂತೆ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆ ವತಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ ಎಂದರು.

    ಎಚ್ಚರ ವಹಿಸಿ: ಝಿಕಾ ವೈರಾಣು ಸೋಂಕಿಗೆ ಒಳಗಾದವರಿಗೆ ಜ್ವರ, ದದ್ದು, ಕೀಲು ನೋವು ಸೇರಿ ವಿವಿಧ ಲಕ್ಷಣ ಕಾಣಿಸಿಕೊಳ್ಳುತ್ತವೆ. ಗರ್ಭಿಣಿ ಹಾಗೂ ಬಾಣಂತಿಯರು ಈ ಬಗ್ಗೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts