More

  ಜಿಪಂ, ತಾಪಂ ಚುನಾವಣೆ ವಿಳಂಬ: ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

  ಬೆಂಗಳೂರು: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 5 ಲಕ್ಷ ರೂಪಾಯಿ ದಂಡ ವಿಧಿಸಿದೆ.

  ಪದೇಪದೆ ‌ಕಾಲಾವಕಾಶ ಕೇಳಿದ ಸರ್ಕಾರ ಹಾಗೂ ಸೀಮಾ ನಿರ್ಣಯ ಆಯೋಗದ ನಡೆಗೆ ತೀವ್ರ ಅಸಮಧಾನ ವ್ಯಕ್ತಪಡಿಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ಪೀಠ, 24 ವಾರ ಕಾಲಾವಕಾಶ ನೀಡಿದರೂ ಸರ್ಕಾರ ಒಂದಿಂಚೂ ಮುಂದಕ್ಕೆ ಹೋಗಿಲ್ಲ. ಸರ್ಕಾರದ ಈ ನಡೆ ನ್ಯಾಯಾಲಯದ ಆದೇಶಗಳನ್ನು ‌ನಿಷ್ಕ್ರೀಯಗೊಳಿಸುವಂತಹದ್ದಾಗಿದೆ. ಜ.30ರೊಳಗೆ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗಳ ಕ್ಷೇತ್ರ ನಿಗದಿ ಹಾಗೂ ಮೀಸಲಾತಿ ಪ್ರಕ್ರಿಯೆ ‌ಪೂರ್ಣಗೊಳಿಸಬೇಕು ಎಂದು ಗಡುವು ನೀಡಿದೆ.

  ದಂಡದ ಮೊತ್ತದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಬೆಂಗಳೂರು ವಕೀಲರ ಸಂಘಕ್ಕೆ ತಲಾ 2 ಲಕ್ಷ ರೂ. ಮತ್ತು 1 ಲಕ್ಷ ರೂ.ಗಳನ್ನು ವಕೀಲರ ಗುಮಾಸ್ತರ ಕಲ್ಯಾಣ ನಿಧಿಯಲ್ಲಿ ಠೇವಣಿ ಇಡಲು ಸರ್ಕಾರಕ್ಕೆ ಆದೇಶಿಸಿದೆ.

  ಶ್ರೀರಾಮುಲುಗೆ ಶಾಕ್​ ಕೊಟ್ಟ ವಜಾಗೊಂಡ ಬಿಎಂಟಿಸಿ ನೌಕರ: ಸಾರಿಗೆ ಸಚಿವರ ವಿರುದ್ಧವೇ ಚುನಾವಣೆಗೆ ಸ್ಪರ್ಧಿಸಲು ಸಜ್ಜು

  ತಂದೆಯನ್ನ ಕೊಂದು ಶವ ತುಂಡರಿಸಿ ಕೊಳವೆಬಾವಿಗೆ ತುರುಕಿದ ಮಗ! ಬಾಗಲಕೋಟೆಯಲ್ಲಿ ಭಯಾನಕ ಕೃತ್ಯ ಬಯಲು

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts