More

    ಮೃಗಾಲಯದಲ್ಲಿರುವ ಪ್ರಾಣಿಗಳಿಗೂ ಕರೊನಾ ಹರಡದಂತಾಗಲು ಏನು ಮಾಡುತ್ತಿದೆ ಸರ್ಕಾರ?

    ಬೆಂಗಳೂರು: ಬನ್ನೇರಘಟ್ಟ ಜೈವಿಕ ರಾಷ್ಟ್ರೀಯ ಉದ್ಯಾನ, ಮೈಸೂರು ಮೃಗಾಲಯ ಸೇರಿ ರಾಜ್ಯದ 9 ಮೃಗಾಲಯ ಹಾಗೂ ಪ್ರಾಣಿ ಸಂಗ್ರಹಾಲಯಗಳಲ್ಲಿರುವ ಪ್ರಾಣಿ, ಪಕ್ಷಿಗಳಿಗೆ ಕರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಂಡಿದೆ.

    ಕರ್ನಾಟಕ ಮೃಗಾಲಯ ಪ್ರಾಧಿಕಾರದ ವ್ಯಾಪ್ತಿಗೆ ಬರುವ ಎ್ಲ 9 ಮೃಗಾಲಯ ಹಾಗೂ ಪ್ರಾಣಿ ಸಂಗ್ರಹಾಲಯಗಳಿಗೆ ಮಾ. 15ರಿಂದ ಏ. 14ರವರೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ರಾಜ್ಯದ ಮೃಗಾಲಯಗಳಲ್ಲಿ 2,825 ಸಸ್ತನಿಗಳು, 1,703 ಪಕ್ಷಿಗಳು ಮತ್ತು 717 ಸರಿಸೃಪಗಳಿವೆ. 51 ಹುಲಿ, 33 ಸಿಂಹ, 96 ಚಿರತೆ, 15 ಕಾಡುಬೆಕ್ಕು ಸೇರಿ 308 ಅಪರೂಪದ ಪ್ರಾಣಿಗಳಿವೆ. ಅವುಗಳ ರಕ್ಷಣೆಗೆ ಮತ್ತು ಕೋವಿಡ್ 19 ಸೋಂಕು ಹರಡದಂತೆ ಎ್ಲ ಜೈವಿಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

    ಮೃಗಾಲಯದಲ್ಲಿ ಪ್ರಾಣಿಗಳ ವಾಸಸ್ಥಾನಗಳನ್ನು ಪ್ರತಿದಿನ ಸ್ವಚ್ಛಗೊಳಿಸಿ, ಸ್ಯಾನಿಟೈಸ್ ಮಾಡಲಾಗುತ್ತಿದೆ. ಪ್ರಾಣಿಗಳಿಗೆ ರೋಗ ನಿರೋಧಕ ಔಷಧ ಕೊಡಲಾಗುತ್ತಿದೆ. ಪ್ರವೇಶ ದ್ವಾರದಲ್ಲಿ ಪ್ರತಿದಿನ ರೋಗಾಣು ನಿರೋಧಕ ದ್ರಾವಣ ಸಿಂಪಡಿಸಲಾಗುತ್ತಿದೆ. ಮೃಗಾಲಯ ಸಿಬ್ಬಂದಿಗೆ ಕರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಸಿಬ್ಬಂದಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ನೀಡಲಾಗಿದೆ.

    ಆನೆ ಶಿಬಿರಗಳಲ್ಲಿ ಮಾವುತರು ಹಾಗೂ ಕಾವಾಡಿಗರ ಮೂಲಕ ಆನೆಗಳಿಗೆ ಸೋಂಕು ತಗುಲುದಂತೆ ಮುನ್ನೆಚ್ಚರಿಕೆ ಕ್ರಮ ಕಗೊಳ್ಳಲಾಗಿದೆ. ಈ ಎಲ್ಲ ವಿವರಗಳನ್ನು ರಾಜ್ಯ ಸರ್ಕಾರ ಗುರುವಾರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ನೇತೃತ್ವದ ವಿಭಾಗೀಯ ಪೀಠಕ್ಕೆ ತಿಳಿಸಿದೆ. ಈ ಕುರಿತು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸರ್ಕಾರದ ಪರ ವಕೀಲರು ಲಿಖಿತ ಹೇಳಿಕೆ ಸಲ್ಲಿಸಿದ್ದಾರೆ.

    ಇಟಲಿಯಲ್ಲಿ ಕರೊನಾ ಗೆದ್ದ ಎರಡು ತಿಂಗಳ ಹಸುಗೂಸು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts