ರಂಗರೂಪಕ ನಾಟಕ ಪ್ರದರ್ಶನಕ್ಕೆ ಚಾಲನೆ

ವಿಜಯವಾಣಿ ಸುದ್ದಿಜಾಲ ಬೀದರ್
ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ ವಷರ್ಾಚರಣೆ ನಿಮಿತ್ತ ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಜಿಲ್ಲೆಯಲ್ಲಿ ಆಯೋಜಿಸಿರುವ `ಪಾಪು ಗಾಂಧಿ-ಗಾಂಧಿ ಬಾಪು ಆದ ಕಥೆ’ ರಂಗರೂಪಕ ನಾಟಕ ಪ್ರದರ್ಶನಕ್ಕೆ ನಗರದ ಗುರುನಾನಕ ಪ್ರೌಢಶಾಲೆ ಆವರಣದಲ್ಲಿ ಮಂಗಳವಾರ ಚಾಲನೆ ನೀಡಲಾಯಿತು.

ಜಿಪಂ ಸಿಇಒ ಮಹಾಂತೇಶ ಬೀಳಗಿ ಉದ್ಘಾಟಿಸಿ ಮಾತನಾಡಿ, ಗಾಂಧೀಜಿ ಪ್ರತಿಪಾದಿಸಿರುವ ಸತ್ಯ ಮತ್ತು ಅಹಿಂಸೆ ತತ್ವ, ಅವರ ಬದುಕು ಮತ್ತು ಹೋರಾಟಗಳ ಬಗ್ಗೆ ತಿಳಿಸುವುದು ಈ ರಂಗಪಯಣದ ಉದ್ದೇಶವಾಗಿದೆ ಎಂದು ಹೇಳಿದರು.

ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ ವಷರ್ಾಚರಣೆ ಸಂದರ್ಭದಲ್ಲಿ ಗಾಂಧೀಜಿಯವರ ಮಹತ್ವವನ್ನು ಇಂದಿನ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ. ವಿಶೇಷವಾಗಿ ವಿದ್ಯಾರ್ಥಿ ಸಮುದಾಯವನ್ನು ಉದ್ದೇಶವಾಗಿಟ್ಟುಕೊಂಡು ಈ ನಾಟಕ ಕಟ್ಟಲಾಗಿದ್ದು, ಸದುಪಯೋಗ ಪಡೆಯಬೇಕು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಗುರುನಾನಕ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷೆ ರೇಷ್ಮಾ ಕೌರ್ ಮಾತನಾಡಿ, ಗಾಂಧೀಜಿ ಜೀವನ ಮತ್ತು ಸಂದೇಶಗಳು ದೇಶದ ಪ್ರಗತಿಗೆ ಪೂರಕವಾಗಿವೆ. ಅವರ ಉತ್ತಮ ಸಂದೇಶಗಳನ್ನು ಯುವ ಪೀಳಿಗೆಗೆ ತಲುಪಿಸುವಲ್ಲಿ ಈ ನಾಟಕ ಸಹಕಾರಿಯಾಗಲಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪ್ರೇಮಸಾಗರ ದಾಂಡೇಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜಶೇಖರ ವಟಗೆ, ಶಾಲೆ ಪ್ರಾಚಾರ್ಯ ಪವನಪ್ರಿಯಾ, ಮುಖ್ಯಗುರು ಆರೀಫ್ ಹಾರಿ, ಕಾಲೇಜಿನ ಪ್ರಾಚಾರ್ಯೆ ಹೇಮಾ ಸುಲ್ತಾನಪುರ, ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ ಸೋನಾರೆ, ವಾರ್ತಾ ಇಲಾಖೆಯ ವಿಜಯಕೃಷ್ಣ ಸೋಲಪುರ, ತುಳಜಪ್ಪ ಬುಧೇರಾ ಇತರರಿದ್ದರು.