More

    ನರೇಗಾ ಕಾಮಗಾರಿ ಸಮರ್ಪಕ ಅನುಷ್ಠಾನವಾಗಲಿ: ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಹೇಳಿಕೆ

    ಮಂಡ್ಯ: ಬರಗಾಲಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಕೆರೆ ಕಟ್ಟೆ, ಕಂದಕ, ಬದು ಸೇರಿದಂತೆ ಕಾಮಗಾರಿಯನ್ನು ನರೇಗಾ ಯೋಜನೆಯಡಿ ಅನುಷ್ಠಾನಕ್ಕೆ ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್ ಸೂಚನೆ ನೀಡಿದರು.
    ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ವಿವಿಧ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಾಲಾ ಶೌಚಗೃಹ, ಅಂಗನವಾಡಿ, ಎನ್‌ಆರ್‌ಎಲ್ಎಂ ಶೆಡ್, ಗೋಮಾಳ ಅಭಿವೃದ್ಧಿ ಹಾಗೂ ಬರಗಾಲಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಬೇಕು ಎಂದರು.
    ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ ಅನುಷ್ಠಾನ ಮಾಡಬೇಕಿರುವ ಕಾಮಗಾರಿಗಳ ಹೆಚ್ಚುವರಿ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗಿದೆ. ಅದರಂತೆ ಕಾಮಗಾರಿ ಆರಂಭ ಮಾಡಬೇಕು. ವಸತಿ ಯೋಜನೆಯಡಿ ನಿರ್ಮಾಣವಾಗುತ್ತಿರುವ ಮನೆಗಳನ್ನು ಪೂರ್ಣಗೊಳಿಸಬೇಕು. ಇನ್ನಿತರೆ ಯೋಜನೆಯ ಕುರಿತು ಪ್ರಗತಿ ಕುರಿತು ಚರ್ಚಿಸಿ ನರೇಗಾ ಯೋಜನೆಯ ಕೂಲಿಕಾರರಿಗೆ ಸಕಾಲದಲ್ಲಿ ಕೂಲಿ ಪಾವತಿಸಬೇಕೆಂದು ತಿಳಿಸಿದರು.
    ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ(ಅಭಿವೃದ್ಧಿ) ಆನಂದ್‌ಕುಮಾರ್, ಯೋಜನಾ ನಿರ್ದೇಶಕ ಸಂಜೀವಪ್ಪ, ಸಹಾಯಕ ಕಾರ್ಯದರ್ಶಿ(ಅಭಿವೃದ್ಧಿ) ಮೋಹನ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts