

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಲಜೀವನ್ ಮಿಷನ್ ಕಾಮಗಾರಿಯಲ್ಲಿ ಲೋಪವಾಗದಂತೆ ಎಚ್ಚರ ವಹಿಸಬೇಕು. ಸಾರ್ವಜನಿಕರಿಂದ ದೂರುಗಳು ಬಂದರೆ ಸಂಬ0ಧಪಟ್ಟ ಅಽಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ ಎಚ್ಚರಿಕೆ ನೀಡಿದರು.
ಹುಬ್ಬಳ್ಳಿ ತಾಲೂಕಿನ ಕಟ್ನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವನೂರು ಗ್ರಾಮ ಹಾಗೂ ಹಳ್ಯಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಯಾಳ ಗ್ರಾಮಗಳಿಗೆ ಮಂಗಳವಾರ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ನಂತರ ಅಽಕಾರಿಗಳಿಗೆ ಸೂಚಿಸಿದರು.
ಕಟ್ನೂರ ಬಹುಗ್ರಾಮ ಕುಡಿಯುವ ನೀರು ಸ್ಥಾವರಕ್ಕೆ ಭೇಟಿ ನೀಡಿ, ಜಾಕ್ವೆಲ್ ಸುತ್ತಲೂ ಸ್ವಚ್ಛಗೊಳಿಸಬೇಕು. ರಿಟರ್ನಿಂಗ್ ವಾಲ್ ಅಳವಡಿಸಬೇಕು. ಕೂಡಲೇ ಪ್ಯಾನಲ್ ದುರಸ್ತಿ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಗ್ರಾಮಸ್ಥರಿಗೆ ಕೊಳವೆಬಾವಿ ನೀರಿನ ಬದಲು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ನೀರು ಒದಗಿಸಬೇಕು. ಬೋರ್ವೆಲ್ ನೀರನ್ನು ಹೆಚ್ಚಾಗಿ ಉಪಯೋಗಿಸುವುದರಿಂದ ಆಗಬಹುದಾದ ತೊಂದರೆಗಳನ್ನು ಜನರಿಗೆ ಮನವರಿಕೆ ಮಾಡಬೇಕು. ಶುದ್ಧ ನೀರನ್ನು ಕುಡಿಯುವಂತೆ ಅರಿವು ಮೂಡಿಸಬೇಕು ಎಂದರು.
ಗ್ರಾಮದ ಕೆಲ ಮನೆಗಳಿಗೆ ತೆರಳಿ ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ಕುಡಿಯುವ ನೀರು ಪೂರೈಕೆಯಾಗುತ್ತಿರುವುದನ್ನು ಪರಿಶೀಲಿಸಿದರು. ಗ್ರಾಮ ಪಂಚಾಯಿತಿಗೆ ತೆರಳಿ ಸಿಬ್ಬಂದಿಯ ಇ- ಹಾಜರಾತಿಯನ್ನು ವೆಬ್ ತಂತ್ರಾ0ಶದಲ್ಲಿ ಪರಿಶೀಲಿಸಿದರು. ತಡವಾಗಿ ಹಾಜರಾತಿ ನಮೂದಿಸುತ್ತಿರುವ ಸಿಬ್ಬಂದಿಗೆ ನೋಟಿಸ್ ನೀಡಬೇಕು ಎಂದು ತಾ.ಪಂ. ಕಾರ್ಯನಿರ್ವಹಕರಿಗೆ ತಿಳಿಸಿದರು.
ತೆರಿಗೆ ವಸೂಲಾತಿ ಪರಿಶೀಲಿಸಿ ವಸೂಲಾತಿ ಕುಂಠಿತವಾಗಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿ ನೋಟಿಸ್ ನೀಡುವಂತೆ ಸೂಚಿಸಿದರು. ಗ್ರಾ.ಪಂ. ಸುತ್ತ ಸ್ವಚ್ಛತೆ ಕಾಪಾಡಬೇಕು. ರಸ್ತೆಗಳು ಮತ್ತು ಚರಂಡಿಗಳನ್ನು ಸ್ವಚ್ಛಗೊಳಿಸಿ ನೈರ್ಮಲ್ಯ ಕಾಪಾಡುವಂತೆ ಪಿಡಿಒಗೆ ಸೂಚಿಸಿದರು. ಸ್ವಚ್ಛ ಭಾರತ್ ಮಿಷನ್ ಯೋಜನೆಯ ಸ್ವಚ್ಛ ವಾಹಿನಿಯ ಮಹಿಳಾ ಚಾಲಕಿಯೊಂದಿಗೆ ಸಮಾಲೋಚಿಸಿದರು. ನಂತರ ವಾಹನದಲ್ಲಿ ಸಂಚರಿಸಿದರು. ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳಿಗೆ ನೀಡುತ್ತಿರುವ ಆಹಾರವನ್ನು ಸೇವಿಸಿ ಗುಣಮಟ್ಟ ಪರಿಶೀಲಿಸಿದರು.
ಕಟ್ನೂರು, ಹಳ್ಯಾಳ, ಗ್ರಾಮದ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಗ್ರಂಥಾಲಯ, ಶೌಚಗೃಹ, ಆಟದ ಮೈದಾನ, ಕಾಂಪೌ0ಡ್, ಕೊಠಡಿಗಳನ್ನು ಪರಿಶೀಲಿಸಿ ಮಕ್ಕಳೊಂದಿಗೆ ಸಂವಾದ ನಡೆಸಿದರು. ಮಕ್ಕಳು ಪ್ರತಿವರ್ಷ ಒಂದೊ0ದು ಗಿಡ ನೆಟ್ಟು ಪೋಷಿಸಿ ಪರಿಸರ ಸಂರಕ್ಷಣೆಗೆ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು. ನಂತರ ಸಂಜೀವಿನಿ ಘಟಕಕ್ಕೆ ಭೇಟಿ ನೀಡಿ ಸ್ವ ಸಹಾಯ ಸಂಘಗಳ ಕಾರ್ಯವೈಖರಿ ಕುರಿತು ಮಾಹಿತಿ ಪಡೆದುಕೊಂಡರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಜಗದೀಶ, ಹುಬ್ಬಳ್ಳಿ ತಾ.ಪಂ. ಇಒ ರಾಮಚಂದ್ರ ಹೊಸಮನಿ, ಗ್ರಾಮ ಪಂಚಾಯಿತಿ ಚುನಾ¬ತ ಪ್ರತಿನಿಽಗಳು, ಪಿಡಿಒ, ಗ್ರಾಮಸ್ಥರು ಉಪಸ್ಥಿತರಿದ್ದರು.