25.7 C
Bangalore
Sunday, December 15, 2019

ಹಾಸ್ಟೆಲ್ ಸುಧಾರಣೆಗೆ ವಾರದ ಗಡುವು

Latest News

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮಧುಮಗಳು; ಮಧುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮಧುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಬೀದರ್: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಅಡಿಯಲ್ಲಿ ನಡೆಯುತ್ತಿರುವ ಹಾಸ್ಟೆಲ್​ಗಳಲ್ಲಿ ವ್ಯವಸ್ಥೆ ಸುಧಾರಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಜಿಪಂ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ್ ಸಂಬಂಧಿತ ಅಧಿಕಾರಿ, ವಾರ್ಡನ್ಗಳಿಗೆ ಸೂಚಿಸಿದ್ದಾರೆ. ಇದಕ್ಕಾಗಿ ಒಂದು ವಾರದ ಗಡುವು ನೀಡಿದ್ದಾರೆ.
ಜಿಪಂ ಕಚೇರಿ ಗುರುವಾರ ಸಮಾಜಕಲ್ಯಾಣ, ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ನಡೆಯುತ್ತಿರುವ ಹಾಸ್ಟೆಲ್ಗಳ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು, ವಾರ್ಡನ್ ಮತ್ತು ಮುರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರಾಂಶುಪಾಲರ ಸಭೆಯಲ್ಲಿ ಮಾತನಾಡಿ, ಹಾಸ್ಟೆಲ್ಗಳಲ್ಲಿ ನಾನಾ ಸಮಸ್ಯೆಗಳಿರುವ ಬಗ್ಗೆ ದೂರು ಬಂದಿವೆ. ವಿವಿಧೆಡೆ ಖುದ್ದು ಭೇಟಿ ನೀಡಿದಾಗ ಸಮಸ್ಯೆ ಕಂಡುಬಂದಿವೆ. ವಾರದೊಳಗೆ ಎಲ್ಲ ವ್ಯವಸ್ಥೆ ಸುಧಾರಣೆ ಕಾಣಬೇಕು ಎಂದು ಖಡಕ್ ಸೂಚನೆ ನೀಡಿದರು.
ಅಭ್ಯಾಸ ಮತ್ತು ಸರ್ಕಾರದಿಂದ ಲಭ್ಯವಾಗುವ ಸೌಕರ್ಯಗಳ ಬಗ್ಗೆ ಪ್ರತಿ ತಿಂಗಳು ವಿದ್ಯಾರ್ಥಿಗಳಿಂದ ಫೀಡ್ ಬ್ಯಾಕ್ ಪಡೆಯಬೇಕು. ಎಲ್ಲ ಹಾಸ್ಟೆಲ್ಗಳಲ್ಲಿ ಕಡ್ಡಾಯ ದೂರು ಪೆಟ್ಟಿಗೆಗಳು ಇಟ್ಟು, ವಿದ್ಯಾರ್ಥಿಗಳಿಂದ ಅಹವಾಲು ಪಡೆಯಬೇಕು. ವಿದ್ಯಾರ್ಥಿಗಳ ಸಮಿತಿ ರಚಿಸಬೇಕು. ಹಾಸ್ಟೆಲ್ನಲ್ಲಿ ಊಟ, ಉಪಹಾರ ಹಾಗೂ ಇತರೆ ಸೌಕರ್ಯಗಳು ಸಮರ್ಪಕವಾಗಿ ಲಭ್ಯವಾಗುತ್ತದೆಯೋ? ಇಲ್ಲವೋ ಎಂಬ ಬಗ್ಗೆ ವಿದ್ಯಾರ್ಥಿ ಸಮಿತಿಯು ಪರಿಶೀಲಿಸಿ ಪ್ರತಿ ತಿಂಗಳು ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದರು.
ಎಲ್ಲ ವಸತಿಯುತ ಶಾಲೆಗಳಲ್ಲಿ ಅಲ್ಲಿನ ಶಿಕ್ಷಕರ ಹೆಸರಿನ ಫಲಕ ಹಾಕಬೇಕು. ಡಿಸಿ, ಜಿಪಂ ಸಿಇಒ, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳ ಮೊಬೈಲ್ ನಂಬರ್ ಇರುವ ಫಲಕಗಳನ್ನು ಹಾಕಬೇಕು ಎಂದು ಸಿಇಒ ಸೂಚಿಸಿದರು. ಅಧಿಕಾರಿ ಹಾಗೂ ವಾರ್ಡನ್ಗಳಿಂದ ಹಾಸ್ಟೆಲ್ಗಳಲ್ಲಿ ಮಾಹಿತಿ ಪಡೆದರು.
ಕಿಚನ್ ಗಾರ್ಡನ್ ಮಾಡಿ: ಯಾವ್ಯಾವ ಹಾಸ್ಟೆಲ್ಗಳಲ್ಲಿ ಕಂಪೌಂಡ್, ನೀರು ಸೇರಿ ಮೂಲಸೌಕರ್ಯಗಳ ವ್ಯವಸ್ಥೆ ಇದೆಯೋ ಅಲ್ಲಲ್ಲಿ ಕಿಚನ್ ಗಾರ್ಡನ್ ಮಾಡಬೇಕು. ಅದರಿಂದಲೇ ತರಕಾರಿ ಪಡೆಯಬೇಕು ಎಂದು ಸಿಇಒ ಗ್ಯಾನೇಂದ್ರಕುಮಾರ ಅವರು ತೋಟಗಾರಿಕೆ ಇಲಾಖೆ ಅಧಿಕಾರಿ ಶಿವಪುತ್ರ ಶಂಭು ಅವರಿಗೆ ಸೂಚಿಸಿದರು. ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಅವರೊಂದಿಗೆ ಚರ್ಚಿಸಿ ಕಂಪೌಂಡ್, ನೀರು ಸೇರಿ ಮೂಲಸೌಕರ್ಯವಿರುವ ಶಾಲೆಗಳಲ್ಲಿ ಬಿಸಿಯೂಟಕ್ಕೆ ಅನುಕೂಲವಾಗುವಂತೆ ಕಿಚನ್ ಗಾರ್ಡನ್ ವ್ಯವಸ್ಥೆ ಮಾಡಲು ಸಲಹೆ ನೀಡಿದರು. 

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...