ಮನರೇಗಾ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ ರಾಹುಲ್ ಶಿಂಧೆ

blank

ಬೆಳಗಾವಿ: ರಾಮದುರ್ಗ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿಯ ಕಾಮಗಾರಿಗಳ ಸ್ಥಳಗಳಿಗೆ ಮಂಗಳವಾರ ಭೇಟಿ ನೀಡಿದ ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಪರಿಶೀಲಿಸಿದರು.

ರಾಮದುರ್ಗ ತಾಲೂಕಿನ ಹಿರೇಕೊಪ್ಪ ಕೆ.ಎಸ್. ಗ್ರಾಪಂಗೆ ಭೇಟಿ ನೀಡಿ ಅವರು ಮನರೇಗಾ ಯೋಜನೆಯಡಿ ಕೈಗೊಂಡಿದ್ದ ಕಾಲುವೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕೂಲಿಕಾರರನ್ನು ಭೇಟಿ ಮಾಡಿ ಕೂಲಿ ಜಮೆ ಹಾಗೂ ಇತರೆ ಕುಂದು ಕೊರತೆಗಳನ್ನು ಆಲಿಸಿದರು. ಬಳಿಕ ಗ್ರಾಪಂ ಸದಸ್ಯರೊಂದಿಗೆ ಸಭೆ ನಡೆಸಿದರು. ಗ್ರಾಮ ಪಂಚಾಯತಿ ಸಿಬ್ಬಂದಿಯ ಹಾಜರಾತಿ, ಇ ಸ್ವತ್ತು ಹಾಗೂ ತೆರಿಗೆ ವಸೂಲಾತಿ ಅಲ್ಲದೇ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲಿಸಿದರು

ಕೆ.ಚಂದರಗಿ ಗ್ರಾಪಂ ವ್ಯಾಪ್ತಿಯ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಜಿಪಂ ಸಿಇಒ ಅವರು ಮಕ್ಕಳಿಗೆ ವಿತರಿಸುವ ಪೌಷ್ಟಿಕ ಆಹಾರ ಮಕ್ಕಳ ಸಂಖ್ಯೆ ಹಾಗೂ ಅಡುಗೆ ಮನೆ ಕುರಿತು ಪರಿಶೀಲನೆ ನಡೆಸಿದರು. ಅದೇ ರೀತಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಕ್ಕಳ ಬಿಸಿ ಊಟ ಮಾಡುತ್ತಿರುವುದನ್ನು ಪರಿಶೀಲನೆ ಮಾಡಿದರು. ತದನಂತರ ಘನ ತ್ಯಾಜ್ಯ ವಿಲೇವಾರಿ ಘಟಕ ವೀಕ್ಷಿಸಿದರು.

ಸುನ್ನಾಳ, ಹಿರೇಕೊಪ್ಪ ಕೆ.ಎಸ್. ಹಾಗೂ ಕಟಕೋಳ ಗ್ರಾಪಂ ವ್ಯಾಪ್ತಿಯಡಿ ನಿರ್ಮಿಸಿರುವ ಯು.ಎಚ್.ಟಿ. ನೀರಿನ್ ಟ್ಯಾಂಕ್ ಮತ್ತು ಜಾಕ್ವಾಲ್ ಪರಿಶೀಲಿಸಿದರು.

ನಂತರ ರಾಮದುರ್ಗ ತಾಲೂಕ ಪಂಚಾಯಿತಿಯಲ್ಲಿ ತಾಲೂಕಿನ ಎಲ್ಲಾ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಪ್ರಗತಿ ಪರಿಶೀಲಿನೆ ನಡೆಸಿ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುಂಜಾಗ್ರತ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದರು

ಇಇ ಎಸ್ ಬಿ ಕೊಳಿ, ತಾಪಂ ಇಒ ಬಸವರಾಜ್ ಐನಾಪುರ್, ಎಇಇ ನಿಜಾಮ್ ಸುರಪುರ, ಸಿ.ಡಿಪಿ.ಒ ಶಂಕರ ಕುಂಬಾರ, ಸಹಾಯಕ ನಿರ್ದೇಶಕರಾದ ಶೇಖರ್ ಹಿರೇಸೋಮಣ್ಣವರ, ಅಪ್ಪಯಪ್ಪ ಕುಂಬಾರ ಹಾಗೂ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

blank
Share This Article

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…

ಗಂಡ-ಹೆಂಡತಿಯ ಸಂಬಂಧದಲ್ಲಿ ಮೂರನೇ ವ್ಯಕ್ತಿ ಎಂಟ್ರಿಯಾಗಿದ್ದರೆ ಈ ರೀತಿ ಸುಲಭವಾಗಿ ತಿಳಿದುಕೊಳ್ಳಬಹುದು..! Husband and Wife

Husband and Wife : ಕಷ್ಟ-ಸುಖ, ನೋವು-ನಲಿವು ಹಾಗೂ ದೇಹ ಎಲ್ಲವನ್ನು ಹಂಚಿಕೊಳ್ಳುವ ಗಂಡ-ಹೆಂಡತಿ ನಡುವಿನ…